ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಬಸ್ ಢಿಕ್ಕಿ; 25 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Update: 2018-08-09 17:45 GMT

ಶಿವಮೊಗ್ಗ, ಆ. 9: ಚಾಲನೆಯ ನಿಯಂತ್ರಣ ಕಳೆದುಕೊಂಡ ಕೆಎಸ್‍ಆರ್‍ಟಿಸಿ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಬಸ್‍ನಲ್ಲಿದ್ದ ಸುಮಾರು 25 ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. 

ಬಸ್ ಢಿಕ್ಕಿಯಿಂದ ವಿದ್ಯುತ್ ಕಂಬಗಳಿಗೆ ಹಾನಿಗೀಡಾಗಿದ್ದು, ರಸ್ತೆ ಅವ್ಯವಸ್ಥೆ ಸರಿಪಡಿಸಲು ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News