ನಾಗಮಂಗಲ: ನಾಲೆಯಲ್ಲಿ ಅಪರಿಚಿತ ಶವ ಪತ್ತೆ

Update: 2018-08-09 18:06 GMT

ನಾಗಮಂಗಲ, ಆ.9: ತಾಲೂಕಿನ ಬಿಂಡಿಗನವಿಲೆ ಹೋಬಳಿ ಹೆರಗನಹಳ್ಳಿ ಬಳಿ ಗುರುವಾರ ಹೇಮಾವತಿ ನಾಲೆಯಲ್ಲಿ ಸುಮಾರು 35 ವರ್ಷದ ಅಪರಿಚಿತ  ಪುರುಷನ ಶವ ಪತ್ತೆಯಾಗಿದೆ.

ಸಾರ್ವಜನಿಕರಿಂದ ವಿಷಯ ತಿಳಿದ ಪೊಲೀಸರು ಶವವನ್ನು ಹೊರತೆಗೆದು ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಬಿಂಡಿಗನವಿಲೆ ಠಾಣೆ ಪೊಲೀಸರನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News