ಕೊಟ್ಟಾರ ಚೌಕಿಯಲ್ಲಿ ಕೃತಕ ನೆರೆ

Update: 2018-08-10 11:23 GMT

ಮಂಗಳೂರು, ಆ.10: ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕೊಟ್ಟಾರಚೌಕಿಯಲ್ಲಿ ಕೃತಕ ನೆರೆ ಪರಿಸ್ಥಿತಿ ಉಂಟಾಗಿತ್ತು.

ತಕ್ಷಣ ಸ್ಥಳಕ್ಕೆ ಧಾವಿಸಿದ ಶಾಸಕ ಡಿ.ವೇದವ್ಯಾಸ ಕಾಮತ್, ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಗಳನ್ನು ಸೂಚಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಕೃತಕ ನೆರೆ ಬಂದಿರುವ ಈ ಪ್ರದೇಶ ರಾಷ್ಟ್ರೀಯ ಹೆದ್ದಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆಗೆ ಒಳಪಡುತ್ತದೆ. ರಸ್ತೆಯ ಒಂದು ಭಾಗಕ್ಕೆ ಬಿದ್ದ ನೀರು ಇಳಿದುಹೋಗಲು ಸೂಕ್ತ ವ್ಯವಸ್ಥೆ ಆಗಬೇಕಿದೆ. ಈ ರಸ್ತೆಯ ಚರಂಡಿ ಬಾಕ್ ಆಗಿರಬಹುದು. ಅದನ್ನು ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಈ ಸಂದರ್ಭ ವಾರ್ಡ್ ಸಮಿತಿಯ ಅಧ್ಯಕ್ಷ ಉಮೇಶ್ ಶೆಟ್ಟಿ ಮತ್ತು ಅನೇಕ ಬಿಜೆಪಿ ಕಾರ್ಯಕರ್ತರು ವಾಹನಗಳ ಸುಗಮ ಸಂಚಾರಕ್ಕೆ ಪೊಲೀಸ್ ಅಧಿಕಾರಿಗಳೊಂದಿಗೆ ಸಹಕರಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News