ಮಡಿಕೇರಿ : ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Update: 2018-08-10 12:31 GMT

ಮಡಿಕೇರಿ, ಆ.10 : ಶಾಲಾ ವಿದ್ಯಾರ್ಥಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ತ್ಯಾಗರಾಜ ಕಾಲೋನಿಯಲ್ಲಿ ನಡೆದಿದೆ. ತ್ಯಾಗರಾಜ ಕಾಲೋನಿ ನಿವಾಸಿ ಶರೀಫಾ ಎಂಬವರ ಪುತ್ರ ಜಾಹೀದ್(16) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.  

ಜಾಹೀದ್ ನಗರದ ಸರಕಾರಿ ಫ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಶಾಲೆಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾನೆ. ಆದರೆ, 9.30ರ ಸಮಯದಲ್ಲಿ ಮನೆಯ  ಸಮೀಪವಿರುವ ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಮಾಹಿತಿ ಅರಿತ ನಗರ ಪೊಲೀಸರು ಸ್ಥಳಕ್ಕಾಗಮಿಸಿ, ಮೃತ ದೇಹದ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News