ಬೈಂದೂರು: ಎನ್ನೆಸ್ಸೆಸ್, ರೋವರ್ಸ್ ಘಟಕ ಉದ್ಘಾಟನೆ
ಉಡುಪಿ, ಆ.10: ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2018-19ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೋವರ್ಸ್ ಘಟಕವ್ನು ಶುಕ್ರವಾರ ಉದ್ಘಾಟಿಸಲಾಯಿತು.
ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಗುರುಮೂರ್ತಿ ತಾಮ್ರಗೌರಿ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಹೊನ್ನಾವರ ಎಸ್‌ಡಿಎಂಸಿ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಸುರೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾಲೇಜಿನ ಕಾರ್ಯಾಧ್ಯಕ್ಷ ಗಿರೀಶ್ ಬೈಂದೂರು ಪಾಠದ ಜೊತೆಗೆ ಇತರ ಚಟುವಟಿಕೆಗಳು ಹಾಗೂ ಎನ್ನೆಸ್ಸೆಸ್ ವಿದ್ಯಾರ್ಥಿಗಳ ಬೆಳವಣಿಗೆಗೆ ಹೇಗೆ ಉಪುುಕ್ತವಾಗಿವೆ ಎಂಬುದನ್ನು ತಿಳಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ ಅತಿಥಿಗಳನ್ನು ಸ್ವಾಗತಿಸಿ, ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಉದಯಕುಮಾರ್ ಎಂ.ಪಿ., ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸತೀಶ್ ಎಂ. ಕಾರ್ಯಕ್ರಮವನ್ನು ನಿರೂಪಿಸಿ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ ವಂದಿಸಿದರು.