ಮಲ್ಲಿಕಟ್ಟೆ: ವಿದ್ಯಾರ್ಥಿಗಳಿಗೆ ಜಂತುಹುಳ ಮಾತ್ರೆ ವಿತರಣೆ
Update: 2018-08-10 20:35 IST
ಮಂಗಳೂರು, ಆ.10: ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನೆಯು ಕದ್ರಿ ಮಲ್ಲಿಕಟ್ಟೆಯ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ.ರಾಮಕೃಷ್ಣ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಕೀಲಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಡಿಡಿಪಿಐ ಶಿವರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಭಾಗವಹಿಸಿದ್ದರು.
ಲಿಸ್ಸಿ ಕೆ.ವಿ.ಸ್ವಾಗತಿಸಿದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಶೋಕ್ ಎಚ್. ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಹಿನ್ನಲೆ ಮತ್ತು ಆವಶ್ಯಕತೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರುದ್ರೇಶ್ ಕಾರ್ಯಕ್ರಮ ನಿರೂಪಿಸಿದರು.