ರಫೇಲ್ ಹಗರಣ ವಿರುದ್ಧ ಪ್ರತಿಭಟನೆ

Update: 2018-08-10 17:59 GMT
ಫ್ರಾನ್ಸ್ನೊಂದಿಗಿನ ಯುದ್ಧ ವಿಮಾನ ರಫೇಲ್ ಒಪ್ಪಂದದ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ವಿರುದ್ಧ ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಂಸದರು ಸಂಸತ್ ಸಂಕೀರ್ಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ರಾಜ್ಬಬ್ಬರ್, ಗುಲಾಂ ನಬಿ ಆಝಾದ್, ಆನಂದ್ ಶರ್ಮಾ, ಅಂಬಿಕಾ ಸೋನಿ, ಸಿಪಿಐಯ ರಾಜಾ, ಎಎಪಿ ಸಂಸದ ಸುಶೀಲ್ ಗುಪ್ತಾ ಹಾಗೂ ಇತರರು ಸೇರಿದಂತೆ ಪ್ರತಿಪಕ್ಷದ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್, ಸಿಪಿಐ, ಆರ್ಜೆಡಿ, ಎಎಪಿಯಂತಹ ಪಕ್ಷಗಳ ಸಂಸದರು ಪ್ರದರ್ಶನಾ ಫಲಕಗಳನ್ನು ಹಿಡಿದುಕೊಂಡು ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor