ಮಂಡ್ಯ; ಬೈಕ್ ಮುಖಾಮುಖಿ ಢಿಕ್ಕಿ : ಓರ್ವ ಮೃತ್ಯು

Update: 2018-08-10 18:16 GMT

ಮಂಡ್ಯ, ಆ.10: ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡಗೆರೆ ಕ್ರಾಸ್ ಬಳಿ ಎರಡು ಬೈಕ್‍ಗಳ ಮುಖಾಮುಖಿ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿ  ನಡೆದಿದೆ.

ಮಳವಳ್ಳಿ ತಾಲೂಕಿನ ಕೆಂಬೂತಗೆರೆ ಗ್ರಾಮದ ದಿನೇಶ್ (35) ಮೃತಪಟ್ಟವ. ಸಂತೋಷ, ವಿನೋದ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ವತ್ರೆಗೆ ಸೇರಿಸಲಾಗಿದೆ. 

ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News