×
Ad

ಮಡಿಕೇರಿ: ಕಾಡಾನೆ ದಾಳಿ; ಕಾರ್ಮಿಕ ಮಹಿಳೆಗೆ ಗಂಭೀರ ಗಾಯ

Update: 2018-08-11 18:23 IST

ಮಡಿಕೇರಿ, ಆ.11: ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗ್ಗೆ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ಮಹಿಳೆ ರಾಧ (55) ಎಂಬವರ ಮೇಲೆ ಏಕಾಏಕಿ ಕಾಡಾನೆ ದಾಳಿ ಮಾಡಿದ ಪರಿಣಾಮ ಅವರ ಎಡಗೈ ಮುರಿದಿದೆ ಮತ್ತು ದೇಹದ ಇತರ ಭಾಗಗಳಿಗೂ ಗಾಯಗಳಾಗಿದೆ. ಗಾಯಾಳುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಘಟನೆ ನಡೆದ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಆಸ್ಪತ್ರೆಗೆ ಭೇಟಿ ನೀಡಿ ರಾಧ ಅವರ ಯೋಗ, ಕ್ಷೇಮ ವಿಚಾರಿಸಿದರು. ಸರಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಈ ಸಂದರ್ಭ ಮಡಿಕೇರಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಣ್ಣಿಕೃಷ್ಣ ಮತ್ತಿತರ ಪ್ರಮುಖರು ಹಾಜರಿದ್ದರು.
  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News