ಮಂಗಳೂರು: ‘ಲರ್ನ್ ದ ಕುರ್‌ಆನ್’ ಪರೀಕ್ಷಾ ಫಲಿತಾಂಶ ಪ್ರಕಟ
Update: 2018-08-11 18:23 IST
ಮಂಗಳೂರು, ಆ.11: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಅಧೀನ ಸಂಸ್ಥೆ ಸಲಫಿ ಎಜುಕೇಶನ್ ಬೋರ್ಡ್, ಸಲಫಿ ಗರ್ಲ್ಸ್ ಮೂವ್‌ಮೆಂಟ್, ಕರ್ನಾಟಕ ಸಲಫಿ ಫೌಂಡೇಶನ್ ರಿಯಾದ್ ಮತ್ತು ಮುಜಾಹಿದ್ ಗರ್ಲ್ಸ್ ಮೂವ್‌ಮೆಂಟ್ ರಿಯಾದ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ಹಂತದ ಕುರ್‌ಆನ್ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.
ಮಹಿಳೆಯರ ವಿಭಾಗದಲ್ಲಿ ಖದೀಜಾ ತಬಸ್ಸುಲ್ ಉಳ್ಳಾಲ, ಮುಕಚೇರಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಶ್‌ಯಮ್ ಅಡ್ಯಾರ್ ಕಣ್ಣೂರು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮರ್ಯಮ್ ಬಾನು ಉಳ್ಳಾಲ ಮುಕಚೇರಿ ಮತ್ತು ಯು.ಟಿ. ಫೌಝೀಯಾ ಅಡ್ಡೂರು ತೃತೀಯ ಸ್ಥಾನ ಪಡೆದಿದ್ದಾರೆ.
ಪುರುಷರ ವಿಭಾಗದಲ್ಲಿ ಅಹ್ಮದ್ ಅನೀಸ್ ಬೊಳಂತೂರು ಪ್ರಥಮ ಸ್ಥಾನ ಗಳಿಸಿದ್ದಾರೆ. ಮುಹಮ್ಮದ್ ಜಿ.ಪಿ. ಗುರುಪುರ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಮುಹಮ್ಮದ್ ಶಬೀರ್ ಹರೇಕಳ ತೃತೀಯ ಸ್ಥಾನ ಗಳಿಸಿದ್ದಾರೆ ಎಂದು ಸಲಫಿ ಎಜುಕೇಶನ್ ಬೋರ್ಡ್ ಕಾರ್ಯದರ್ಶಿ ಅಬೂಬಿಲಾಲ್ ಎಸ್.ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.