ಕೇರಳದಲ್ಲಿ ಮುಂದುವರಿದ ಮಳೆ: ಮೃತರ ಕುಟುಂಬದ ಸದಸ್ಯರಿಗೆ 4 ಲಕ್ಷ ರೂ. ಪರಿಹಾರ

Update: 2018-08-11 13:26 GMT

ಹೊಸದಿಲ್ಲಿ, ಆ. 11: ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ನೆರೆಯಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಮನೆ ಹಾಗೂ ಭೂಮಿ ಕಳೆದುಕೊಂಡವರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ.

ಇಡುಕ್ಕಿ, ಆಲಪ್ಪುಳ, ಎರ್ನಾಕುಳಂ, ವಯನಾಡ್, ಕೋಝಿಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳ ನೆರೆ ಪೀಡಿತ ಪ್ರದೇಶಗಳಿಗೆ ಪಿಣರಾಯಿ ವಿಜಯನ್ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಮುಖ್ಯಮಂತ್ರಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಮಾತುಕತೆ ನಡೆಸಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅವರಿಗೆ ಪತ್ರ ಬರೆದು ಕೇರಳದ ಪರಿಹಾರ ಕಾರ್ಯಾಚರಣೆಗೆ ನಿಧಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಕೇರಳದಲ್ಲಿ ನೈಋತ್ಯ ಮಳೆ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿದೆ. ಒಟ್ಟು 12,240 ಕುಟುಂಬಗಳ 53,501 ಜನರನ್ನು ರಾಜ್ಯದ ವಿವಿಧ ಭಾಗಗಳಲ್ಲಿರುವ 439 ನಿರಾಶ್ರಿತರ ಶಿಬಿರಗಳಿಗೆ ವರ್ಗಾಯಿಸಲಾಗಿದೆ. ಸೇನಾ ಪಡೆ, ನೌಕಾ ಪಡೆ ಹಾಗೂ ತಟ ರಕ್ಷಣಾ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News