×
Ad

ಉದ್ಯಾವರ: ಆ. 15ರಂದು ಉಚಿತ ಸಮವಸ್ತ್ರ, ವಿದ್ಯಾರ್ಥಿ ವೇತನ ವಿತರಣೆ

Update: 2018-08-11 21:30 IST

ಉದ್ಯಾವರ, ಆ.11: ಇಲ್ಲಿನ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ 72ನೆ ಸ್ವಾತಂತ್ರೋತ್ಸವದ ಅಂಗವಾಗಿ ಗ್ರಾಮದ ಪ್ರಾಥಮಿಕ ಶಾಲೆಯ 7ನೆ ತರಗತಿ ಅರ್ಹ ವಿದ್ಯಾರ್ಥಿಗಳಿಗೆ ಯು. ಪದ್ಮನಾಭ ಶೆಟ್ಟಿಗಾರ್ ಮತ್ತು ಸದಾನಂದ ಕಾಂಚನ್ ಸ್ಮಾರಕ, ಫ್ರೌಡ ಶಾಲಾ 10ನೇ ತರಗತಿಯ ಅರ್ಹ ವಿದ್ಯಾರ್ಥಿಗಳಿಗೆ ಟಿ.ವೈ.ಶಾಬುದ್ದೀನ್ ಸ್ಮಾರಕ, ದ್ವಿತಿಯ ಪಿಯುಸಿ ಅರ್ಹ ವಿದ್ಯಾರ್ಥಿಗಳಿಗೆ ಐರಿನ್ ಮಿನೇಜಸ್ ಸ್ಮಾರಕ ವಿದ್ಯಾರ್ಥಿ ವೇತನ ಮತ್ತು ಅರ್ಹ ಗ್ರಾಮಸ್ಥರಿಗೆ ಮಂಜುನಾಥ ಉದ್ಯಾವರ ಸ್ಮಾರಕ ವೈದ್ಯಕೀಯ ನೆರವು ಹಾಗೂ ಅಬ್ದುಲ್ ಜಲೀಲ್ ಸಾಹೇಬ್ ಪ್ರಾಯೋಜಕತ್ವ ದಲ್ಲಿ ಉಚಿತ ಸಮವಸ್ತ್ರ ವಿತರಣಾ ಸಮಾರಂಭ ಆ.15ರ ಬುಧವಾರ ಅಪರಾಹ್ನ 2:30ಕ್ಕೆ ಉದ್ಯಾವರ ರಾ.ಹೆದ್ದಾರಿ 66ರ ಪ್ಸಾ ಆಡಿಟೋರಿಯಂನಲ್ಲಿ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕ ಹಾಗೂ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೋಹನ್ ರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್‌ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಭಾರತ್ ಸ್ಕೌಟ್ ಗೈಡ್ಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಸಂಸ್ಥೆಯ ನಿರ್ದೇಶಕ ಅಬ್ದುಲ್ ಜಲೀಲ್ ಸಾಹೇಬ್, ಉದ್ಯಾವರ ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್ ಭಾಗವಹಿಸಲಿರುವರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲಾ ಮಕ್ಕಳ ನೃತ್ಯ ವೈವಿಧ್ಯ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಅನುಪ್‌ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆ ಅಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News