ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Update: 2018-08-11 22:34 IST
ದಾವಣಗೆರೆ,ಆ.11: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮದಲ್ಲಿ ನಡೆದಿದೆ.
ರುದ್ರೇಶ್ (30) ಆತ್ಮಹತ್ಯೆ ಮಾಡಿದ ರೈತ. ಕಳೆದ ರಾತ್ರಿ ರುದ್ರೇಶ್ ತಮ್ಮ ಜಮೀನಿನಲ್ಲಿರುವ ಮನೆಯಲ್ಲಿ ಸಾಲಬಾಧೆ ತಾಳಲಾರದೆ ನೊಂದು ವಿಷ ಸೇವಿಸಿದ್ದಾರೆ.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಎರಡೂವರೆ ಎಕರೆ ಜಮೀನು ಹೊಂದಿರುವ ರುದ್ರೇಶ್ ಕತ್ತಲಗೆರೆಯ ವಿಜಯಬ್ಯಾಂಕ್ ನಲ್ಲಿ 4 ಲಕ್ಷ ಸಾಲ, ಕೈಗಡವಾಗಿ 6 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.
ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.