×
Ad

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರರಿಬ್ಬರಿಗೆ ಗಾಯ

Update: 2018-08-11 23:14 IST

ಬಂಟ್ವಾಳ, ಆ. 11: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಮಣಿಹಳ್ಳ ಎಂಬಲ್ಲಿ ಶನಿವಾರ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಅಲ್ಲಿಪಾದೆ ನಿವಾಸಿಗಳಾದ, ಬೈಕ್ ಸವಾರ ಪ್ರವೀಣ್, ಸಹ ಸವಾರ ನಿತಿನ್ ಗಾಯಗೊಂಡವರು ಎಂದು ತಿಳಿದು ಬಂದಿದೆ.

ಇವರಿಬ್ಬರು ಬಂಟ್ವಾಳದಿಂದ ಅಲ್ಲಿಪಾದೆ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮಣಿಹಳ್ಳ ಎಂಬಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಇಬ್ಬರಿಗೂ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಂಟ್ವಾಳ ಟ್ರಾಫಿಕ್ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News