ಹುಬ್ಬಳ್ಳಿಯಲ್ಲಿ ಏಷ್ಯಾದ ಮೊದಲ ಹವಾನಿಯಂತ್ರಿಕ ಕೋರ್ಟ್ ಸಂಕೀರ್ಣ ಉದ್ಘಾಟನೆ

Update: 2018-08-12 06:59 GMT

ಹುಬ್ಬಳ್ಳಿ, ಆ.12: ಇಲ್ಲಿನ  ವಿದ್ಯಾನಗರದ ತಿಮ್ಮ ಸಾಗರದಲ್ಲಿ  ನಿರ್ಮಾಣಗೊಂಡಿರುವ ಏಷ್ಯಾದಲ್ಲೇ  ಮೊದಲ  ವಿಶಿಷ್ಟ ಮತ್ತು ವಿಭಿನ್ನವಾದ ಹವಾನಿಯಂತ್ರಿತ ನ್ಯಾಯಾಲಯ ಸಂಕೀರ್ಣ ರವಿವಾರ ಉದ್ಘಾಟನೆಗೊಂಡಿತು.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ  ದೀಪಕ್ ಮಿಶ್ರಾ ನೂತನ ನ್ಯಾಯಾಲಯ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು.

 ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ  ಮೋಹನ್ ಶಾಂತಗೌಡ ಮತ್ತು ಅಬ್ದುಲ್ ನಝೀರ್,  ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಸೇರಿದಂತೆ 30 ನ್ಯಾಯಾಧೀಶರುಗಳು , ಮುಖ್ಯ ಮಂತ್ರಿ  ಎಚ್.ಡಿ. ಕುಮಾರಸ್ವಾಮಿ , ಮಾಜಿ ಮುಖ್ಯ ಮಂತ್ರಿ ಜಗದೀಶ್ ಶೆಟ್ಟರ್  ಮತ್ತಿತರ  ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ನ್ಯಾಯಾಲಯದ ಕಟ್ಟಡವು ಒಟ್ಟು 7 ಮಹಡಿಗಳನ್ನು ಹೊಂದಿದ್ದು, ಸಂಪೂರ್ಣ ಕೇಂದ್ರೀಕೃತ ಹವಾನಿಯಂತ್ರಿತ ವ್ಯವಸ್ಥೆಯನ್ನು ಹೊಂದಿದೆ.. ಮೊದಲ ಮಹಡಿಯಲ್ಲಿ ಹಾಲ್ ನಲ್ಲಿ ವಾದಿ- ಪ್ರತಿವಾದಿ ಹಾಗೂ ಸರಕಾರಿ ವಕೀಲರಿಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆ , ಸಂಪೂರ್ಣ ನ್ಯಾಯಾಲಯದ ಸಂಕೀರ್ಣಕ್ಕೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು , ಪ್ರತಿ ಮಹಡಿಯಲ್ಲಿ 4 ನ್ಯಾಯಾಲಯ ಕಲಾಪದ ಸಭಾಂಗಣಗಳನ್ನು ಹೊಂದಿದೆ. ಅಲ್ಲದೇ ಕೈದಿಗಳಿಗೆ ಲಾಕಪ್ ಕೊಠಡಿ ಮತ್ತು ಕಕ್ಷಿದಾರರಿಗೆ ವಿಶ್ರಾಂತಿ ಕೊಠಡಿ  ಸೌಲಭ್ಯ ನೂತನ ನ್ಯಾಯಾಲಯ ಕಟ್ಟಡದಲ್ಲಿ ಒದಗಿಸಲಾಗಿದೆ.

ನ್ಯಾಯಾಲಯದ ಆವರಣದಲ್ಲಿ  ಒಂದು ಸಾವಿರ ವಾಹನಗಳ  ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News