×
Ad

ಪಿಡಿಒಗಳಿಗೆ ಸಾರ್ವಜನಿಕರ ಸೇವೆಗೆ ಉತ್ತಮ ಅವಕಾಶ: ಉಡುಪಿ ಜಿಲ್ಲಾಧಿಕಾರಿ

Update: 2018-08-12 17:17 IST

ಉಡುಪಿ, ಆ.12: ಪಂಚಾಯತ್ ಅಭಿವೃದ್ದಿ ಅಧಿಕಾರಿ(ಪಿಡಿಓ) ಹುದ್ದೆಯ ಮೂಲಕ ನಾಗರಿಕ ಸೇವೆ ಸಲ್ಲಿಸಲು ಉತ್ತಮ ಅವಕಾಶಗಳಿದ್ದು, ಪಿಡಿಒಗಳು ಇದನ್ನು ಸದುಪಯೋಗಪಡಿಸಿಕೊಂಡು, ನಾಗರೀಕರಿಗೆ ಉತ್ತಮ ಸೇವೆ ನೀಡ ಬೇಕೆಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಹೊಸದಾಗಿ ನೇಮಕಗೊಂಡ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಅಂಬಲಪಾಡಿಯ ರಾಷ್ಟ್ರೀಯ ಸ್ವಸಹಾಯ ತರಬೇತಿ ಸಂಸ್ಥೆ ಯಲ್ಲಿ ಎಂಟು ವಾರಗಳ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಕ್ರಮದ ಸಮಾ ರೋಪ ಸಮಾರಂಭದಲ್ಲಿ ಅರು ಶನಿವಾರ ಮಾತನಾಡುತಿದ್ದರು.

ಪಿಡಿಒ ಹುದ್ದೆಯು ಗ್ರಾಮೀಣ ನಾಗರಿಕರಿಗೆ ಉತ್ತಮ ಸೇವೆ ಒದಗಿಸುವ ಸುಯೋಗವನ್ನು ನೀಡಿದ್ದು, ಪಿಡಿಒಗಳು ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸಿ ಗ್ರಾಮೀಣ ಜತೆಗೆ ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಒಗದಿಸುವಲ್ಲಿ ಯಶಸ್ವಿಯಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಅಬ್ದುಲ್ ನಜೀರ್ ಸಾಬ್ ಗ್ರಾಮಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾಧ್ಯಾಪಕ ಪ್ರಮೋದ್ ಕುಮಾರ್, ಜಿಲ್ಲಾ ಪಂಚಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೋಹನ್‌ರಾಜ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿರ್ದೇಶಕಿ ಮಾಲತಿ ರಾವ್, ಪ್ರಾಂಶುಪಾಲ ಅಶೋಕ್, ಜಿಲ್ಲಾ ಪಂಚಯತ್ ಸಹಾಯಕ ಕಾರ್ಯದರ್ಶಿ ಡಿಮೆಲ್ಲೋ, ಸಂಪನ್ಮೂಲ ವ್ಯಕ್ತಿಗಳಾದ ಅಣ್ಣಪ್ಪ ಸೇರ್ವೆಗಾರ್, ಜಯವಂತರಾವ್, ಮಹೇಶ್ ಕಾಡೂರು, ಪ್ರಮೀಳಾ ಯರ್ಲಪಾಡಿ ಉಪಸ್ಥಿತರಿದ್ದರು.

ಉಡುಪಿ ತಾಪಂ ಸಹಾಯಕ ನಿರ್ದೇಶಕ ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News