×
Ad

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಜಯಾ ತಾಹಿಲ್ರಾಮಣಿ ಪ್ರಮಾಣ ವಚನ

Update: 2018-08-12 19:00 IST

ಚೆನ್ನೈ,ಆ.12: ನ್ಯಾ.ವಿಜಯಾ ಕಮಲೇಶ ತಾಹಿಲ್ರಾಮಣಿ ಅವರು ರವಿವಾರ ಇಲ್ಲಿಯ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮದ್ರಾಸ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ ಪುರೋಹಿತ ಅವರಿಂದ ಪ್ರಮಾಣ ವಚನವನ್ನು ಸ್ವೀಕರಿಸಿದರು. ಅವರು ಮದ್ರಾಸ್ ಉಚ್ಚ ನ್ಯಾಯಾಲಯದ ಮೂರನೇ ಮಹಿಳಾ ಮುಖ್ಯ ನ್ಯಾಯಾಧೀಶರಾಗಿದ್ದಾರೆ.

ಬಾಂಬೆ ಉಚ್ಚ ನ್ಯಾಯಾಲಯದ ಪ್ರಭಾರ ಮುಖ್ಯ ನ್ಯಾಯಾಧೀಶರಾಗಿದ್ದ ಅವರನ್ನು ಇತ್ತೀಚಿಗೆ ಮದ್ರಾಸ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಕಗೊಳಿಸಲಾಗಿತ್ತು. ಮದ್ರಾಸ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾ.ಇಂದಿರಾ ಬ್ಯಾನರ್ಜಿ ಅವರು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಬಡ್ತಿ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News