×
Ad

ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿವಿಧ ಸ್ವರ್ಧೆ

Update: 2018-08-12 21:30 IST

ಮಂಗಳೂರು, ಆ.12: ನಗರ ಹೊರವಲಯದ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಕಾಲೇಜು ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಹಯೋಗದಲ್ಲಿ ಶಕ್ತಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿವಿಧ ಸ್ವರ್ಧೆಗಳು ರವಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಕ್ತಿ ವಸತಿ ಶಾಲೆಯ ಸ್ಥಾಪಕ ಹಾಗೂ ಶ್ರಿ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಯ್ಕ್, ಶಕ್ತಿ ಶಿಕ್ಷಣ ಸಂಸ್ಥೆಯು ಅಂತಾರಾಷ್ಟ್ರೀಯ ಗುಣಮಟ್ಟದಾಗಿದ್ದು, ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಶಿಕ್ಷಣವನ್ನು ನೀಡುವ ಗುರಿ ಹೊಂದಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪೂರ್ಣಿಮಾ ರೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಮೂಡುಶೆಡ್ಡೆ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಸುಬ್ರಾಯ ಪೈ, ಸಂಸ್ಥೆಯ ಪ್ರಮುಖ ಸಲಹೆಗಾರ ರಮೇಶ್ ಕೆ. ಹಾಗೂ ನಸೀಮಾ ಬಾನು, ನೀಮಾ ಸಕ್ಸೇನಾ ಮತ್ತಿತರರು ಉಪಸ್ಥಿತರಿದ್ದರು.

 ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತಾಧಿಕಾರಿ ಕೃಷ್ಣ ಕುಮಾರ್ ಸ್ವಾಗತಿಸಿದರು. ಶಕ್ತಿ ಎಜುಕೇಶನ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಅತಿಥಿಗಳನ್ನು ಪರಿಚಯಿಸಿದರು. ಶಕ್ತಿ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ವಂದಿಸಿದರು. ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News