ವೆಂಕಟ್ರಮಣ ಗೌಡ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

Update: 2018-08-12 17:46 GMT

ಪುತ್ತೂರು, ಆ. 12:  ತಾಲ್ಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲದ ನೀರುಕುಕ್ಕು ಎಂಬಲ್ಲಿ ಸಾವಿಗೆ ಮುನ್ನ ಡೆತ್ ನೋಟ್ ಬರೆದಿಟ್ಟು ತನ್ನ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವೆಂಕಟ್ರಮಣ ಗೌಡ ಅವರ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸುವಂತೆ ಹಾಗೂ ಮಾನಸಿಕ ಹಿಂಸೆ ನೀಡಿ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲ್ಲೂಕು ಒಕ್ಕಲಿಗ ಗೌಡ ಸೇವಾ ಸಂಘದವರು ಪ್ರಕರಣದ ತನಿಖೆ ನಡೆಸುತ್ತಿರುವ ಪುತ್ತೂರು ನಗರ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಪ್ರಧಾನ ಕಾರ್ಯದರ್ಶಿ ಮನೋಹರ್ ಕೆ.ವಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ಯುವ ಗೌಡ ಸಂಘದ ಅಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಗೌಡ ನಂದಿಲ, ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಮಹಿಳಾ ಗೌಡ ಸಂಘದ ಅಧ್ಯಕ್ಷೆ ಯಶೋದಾ, ಗೌರವಾಧ್ಯಕ್ಷೆ ಗೌರಿ ಬನ್ನೂರು, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಅಧ್ಯಕ್ಷ ಎ.ವಿ.ನಾರಾಯಣ ಮತ್ತಿತರರ ನೇತೃತ್ವದಲ್ಲಿ ಸಂಘಟನೆಯ ಪ್ರಮುಖರು ಪುತ್ತೂರು ನಗರ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News