ಕೋಲಾರ: ಶಾಲಾ ಬಸ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2018-08-13 04:13 GMT

ಕೋಲಾರ, ಆ. 13: ಶಾಲಾ ಬಸ್ ಹಾಗೂ ‌ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಮಾಲೂರು‌ ತಾಲೂಕಿನ ಎಸ್ ಎಫ್ ಎಸ್ ಶಾಲೆಯ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಬೈಕ್ ಚಾಲಕ ರವಿಕುಮಾರ್ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ನಂತರ ಬಸ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News