ಸಾಲಿಗ್ರಾಮ: ಮತಗಟ್ಟೆ ಸ್ಥಳಾಂತರ
Update: 2018-08-13 20:54 IST
ಉಡುಪಿ, ಆ.13: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆ ಸಂಖ್ಯೆ 5ರಲ್ಲಿ ಮಾಡಲಾದ ಕೋಟದ ಜಿಪಂ ಹಿರಿಯ ಪ್ರಾಥಮಿಕ ಶಾಲೆ (ಪೂರ್ವ ಕಟ್ಟಡ) ಶಿಥಿಲಗೊಂಡಿದ್ದು, ಈ ಮತಗಟ್ಟೆಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಟತಟ್ಟು ಇಲ್ಲಿಗೆ ಸ್ಥಳಾಂತರಿಸಲಾಗಿದೆ.
ಆದ್ದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮತಗಟ್ಟೆ 5 ರಲ್ಲಿರುವ ಮತದಾರರು ಬದಲಾವಣೆ ಮಾಡಲಾದ ಮತಗಟ್ಟೆಯಲ್ಲಿ ಮತ ಚಲಾಯಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.