×
Ad

ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Update: 2018-08-13 22:24 IST

ಉಡುಪಿ, ಆ.13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆಯಲ್ಲಿ ಪ್ರಾರಂಭಿಸಿದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನಕ್ಕೆ ಉಡುಪಿಯ ಶಾಸಕ ರಘುಪತಿ ಭಟ್ ಸೋಮವಾರ ಚಾಲನೆ ನೀಡಿದರು.

ಉಡುಪಿಯ ಕರ್ನ್ನಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಸೋಮವಾರ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛಗೊಳಿಸಿದರು. ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 365 ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಗುತ್ತದೆ ಎಂದು ಯೊೀಜನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಉಡುಪಿಯ ಕರ್ನ್ನಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಸೋಮವಾರ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛಗೊಳಿಸಿದರು. ಈ ತಿಂಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 365 ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಗುತ್ತದೆ ಎಂದು ಯೋಜನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯೋಜನೆಯ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಅಜ್ರಿ, ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ., ಎನ್‌ಐಎಸ್‌ಟಿ ಪ್ರಾಂಸುಪಾಲರಾದ ಅಶೋಕ್, ತಾಲೂಕು ಯೋಜನಾಧಿಕಾರಿ ರೋಹಿತ್ ಎಚ್. ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News