ಮಂಡ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ದಂಪತಿ, ಇಬ್ಬರು ಮಕ್ಕಳು ಅಸ್ವಸ್ಥ

Update: 2018-08-13 17:10 GMT

ಮಂಡ್ಯ, ಆ.13: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ, ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದ ಮರೀಗೌಡ(48) ಪತ್ನಿ ರಜನಿ (44) ಮಕ್ಕಳಾದ ಚಂದ್ರು(13) ಹಾಗೂ ಚೇತನ್(10) ಆತ್ಮಹತ್ಯೆಗೆ ಯತ್ನಿಸಿದವರೆಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಮರೀಗೌಡ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ. ಅವರು ಕುಟುಂಬ ಸಮೇತ ಮಾರುತಿ ಒಮ್ನಿ ವಾಹನದಲ್ಲಿ ಬೆಂಗಳೂರಿನಿಂದ ಹೊರಟು ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯದಲ್ಲಿರುವ ಜೀವನ್ ರಕ್ಷಾ ಪೊಲಿಸ್ ಕೇಂದ್ರ ಮುಂಭಾಗದಲ್ಲಿ ವಿಷ ಸೇವಿಸಿದ್ದಾರೆ.

ಅಸ್ವಸ್ಥಗೊಂಡು ಒದ್ದಾಡುತ್ತಿದ್ದುದ್ದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಾಳಕ್ಕಾಗಮಿಸಿದ ಪೊಲೀಸರು ಎಲ್ಲರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದರು.

ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News