×
Ad

ಸಂವಿಧಾನ ಪ್ರತಿ ಸುಟ್ಟು ಹಾಕಿದ ಕೃತ್ಯಕ್ಕೆ ಖಂಡನೆ: ದಸಂಸ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ

Update: 2018-08-13 23:56 IST

ಮಂಗಳೂರು, ಆ. 13: ದಿಲ್ಲಿಯ ಜಂತರ್‌ಮಂತರ್‌ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಘೋಷಣೆ ಕೂಗಿದ ದೇಶದ್ರೋಹಿಗಳ ಕೃತ್ಯವನ್ನು ಖಂಡಿಸಿ ದಸಂಸ(ಪ್ರೊ.ಬಿ.ಕೃಷ್ಣಪ್ಪಸ್ಥಾಪಿತ) ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು.

ಈ ಸಂದರ್ಭ ರಾಜ್ಯ ಸಂಘಟನಾ ಸಂಚಾಲಕ ಎಂ.ದೇವದಾಸ್, ಸಮುದಾಯ ಸಂಘಟನೆಯ ವಾಸುದೇವ ಉಚ್ಜಿಲ, ಜಿಲ್ಲಾ ಸಂಚಾಲಕ ರಘು ಕೆ.ಎಕ್ಕಾರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಾನಂದ ಡಿ., ಲೋಹಿತ್ ಎಚ್.ಡಿ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News