ಚಿಕ್ಕಮಗಳೂರು: ನಿರಂತರ ಮಳೆಗೆ ನೂರಾರು ಎಕರೆ ಜಮೀನು ಜಲಾವೃತ

Update: 2018-08-13 18:51 GMT

ಚಿಕ್ಕಮಗಳೂರು,ಆ.14: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಅಣೆಕಟ್ಟೆಯ ಕಾಲುವೆ ನೀರು ಉಕ್ಕಿ ಹರಿದು ಕರಕುಚ್ಚಿ ಗ್ರಾಮದ ನೂರಾರು ಎಕರೆ ಜಮೀನು ಜಲಾವೃತಗೊಂಡು ರೈತರು ಬೆಳೆದ ಬೆಳೆ ಹಾನಿಯಾಗಿದೆ. 

ಬಯಲುಸೀಮೆ ಮತ್ತು ಮಲೆನಾಡು ಭಾಗದಲ್ಲಿ ಸತತ ಮಳೆಯಾಗುತ್ತಿದ್ದು, ಭದ್ರಾ ಅಣೆಕಟ್ಟು ತುಂಬಿದ್ದು ನೀರು ಹೊರಬಿಡಲಾಗುತ್ತಿದೆ. ಭದ್ರಾ ಅಣೆಕಟ್ಟೆಯ ಕಾಲುವೆಯಲ್ಲಿ ತುಂಬಾ ನೀರು ಹರಿಯುತ್ತಿರುವುದರಿಂದ ಭತ್ತದ ಗದ್ದೆಗಳಿಗೆ ನೀರು ನುಗ್ಗಿ ನಾಟಿ ಹಾಳಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ರೈತರು ಆರೋಪಿಸಿದ್ದಾರೆ. 

ಮಳೆಯೊಂದಿಗೆ ಬಾರಿ ಪ್ರಮಾಣದಲ್ಲಿ ಗಾಳಿಯೂ ಬೀಸುತ್ತಿದ್ದು, ಅಡಿಕೆ ಮರಗಳು ಕೂಡ ಮುರಿದು ಬಿದ್ದಿವೆ. ಪ್ರಕೃತಿ ವಿಕೋಪದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗುತ್ತಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಮಳೆಯಿಂದ ನಷ್ಟ ಉಂಟಾಗಿರುವುದರಕ್ಕೆ ಸರ್ಕಾರ ಪರಿಹಾರ ನೀಡುವಂತೆ ಈ ಭಾಗದ ರೈತರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News