ಹೊನ್ನಾವರ: ಭೀಕರ ರಸ್ತೆ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

Update: 2018-08-14 13:51 GMT

ಕಾರವಾರ,ಆ.14: ಟೆಂಪೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಸಂಭವಿಸಿದೆ.

ಕುಮಟಾ ನಿವಾಸಿ ಅಭಿಷೇಕ ನಾಯ್ಕ ಹಾಗೂ ಅನಂತವಾಡಿ ನಿವಾಸಿಗಳಾದ ಸಂದೀಪ ಗೌಡ ಮತ್ತು ಸಂಗೀತ ಗೌಡ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆದ ಪರಿಣಾಮ ಎದುರುಗಡೆಯಿಂದ ಬರುತ್ತಿದ್ದ ಟೆಂಪೊಗೆ ಢಿಕ್ಕಿ ಹೊಡೆದಿದ್ದು, ಬಳಿಕ ಬೈಕ್ ಗೆ ಬೆಂಕಿ ಹೊತ್ತಿ ಸುಟ್ಟು ಭಸ್ಮವಾಗಿದೆ. ಅಲ್ಲದೆ ಬೆಂಕಿ ಬೈಕಿನಲ್ಲಿದ್ದ ಸವಾರರಿಗೂ ತಗುಲಿದ್ದು, ಮೂವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News