ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ ವಿಚಾರಣಾಧೀನ ಕೈದಿ
Update: 2018-08-14 21:02 IST
ಮಂಗಳೂರು, ಆ.14: ಮಂಗಳೂರು ಸಬ್ ಜೈಲ್‌ನಲ್ಲಿದ್ದ ವಿಚಾರಣಾಧೀನ ಕೈದಿ ಮುಕ್ಸೀನ್ ಎಂಬಾತ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೂಲವ್ಯಾಧಿಯ ಔಷಧಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ವಾಂತಿ ಮಾಡಿಕೊಳ್ಳುತ್ತಿರುವುದನ್ನು ಕಂಡು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆಗೆ ನುಗ್ಗಿ ಕಳವು, ದನ ಕಳವು, ಹಲ್ಲೆ ಮೊದಲಾದ ಪ್ರಕರಣಗಳು ಈತನ ಮೇಲಿದ್ದು, ವಿಚಾರಣಾಧೀನ ಕೈದಿಯಾಗಿ ಜೈಲು ಸೇರಿದ್ದ ಎಂದು ಜೈಲು ಮೂಲಗಳು ತಿಳಿಸಿವೆ.