ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ

Update: 2018-08-14 15:55 GMT

ಬೆಂಗಳೂರು, ಆ.14: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಲಂ 3, ಕೋಕಾ ಕಾಯ್ದೆ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಜಿಸ್ಡ್ ಕ್ರೈಮ್ಸ್ ಆಕ್ಟ್) ಅಳವಡಿಸಿಕೊಂಡು ಮೊಕದ್ದಮೆ ಅನ್ನು ಮತ್ತಷ್ಟು ಗಟ್ಟಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಗೌರಿ ಲಂಕೇಶ್ ಪ್ರಕರಣವನ್ನು ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಜತೆಗೆ ಶಸ್ತ್ರಾಸ್ತ್ರ ಕಾಯಿದೆ (ಆರ್ಮ್ಸ್ ಆಕ್ಟ್) ಅಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ ಎಂದು ತನಿಖಾಧಿಕಾರಿ ಎಂ.ಎನ್. ಅನುಚೇತ್ ಮಂಗಳವಾರ ತಿಳಿಸಿದ್ದಾರೆ.

ಈ ಪ್ರಕರಣವನ್ನು ಕಲಂ 302, 114, 118, 120(ಬಿ), 35 ಐಪಿಸಿ ಜತೆಗೆ 3, 25 ಆರ್ಮ್ಸ್ ಆಕ್ಟ್ ಅಡಿಯಲ್ಲಿ ಮಂಗಳವಾರ ಕಲಂ 3 ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಜಿಸ್ಡ್ ಕ್ರೈಮ್ಸ್ ಆಕ್ಟ್ ಅನ್ನು ಅಳವಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಅನುಚೇತ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News