×
Ad

ಮಳೆ: ಹೈ ಅಲರ್ಟ್‌ಗೆ ಜಿಲ್ಲಾಡಳಿತಕ್ಕೆ ಸೂಚನೆ- ಸಚಿವ ಯು.ಟಿ. ಖಾದರ್

Update: 2018-08-14 21:35 IST

ಮಂಗಳೂರು, ಆ.14: ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತವನ್ನು ಸನ್ನದ್ಧ ಸ್ಥಿತಿಯಲ್ಲಿರಿಸಲು ರಾಜ್ಯ ಸರಕಾರ ಸೂಚಿಸಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ನದಿ ತೀರ ಹಾಗೂ ರಾಜಕಾಲುವೆ ಪ್ರದೇಶಗಳ ಸುತ್ತಮುತ್ತಲಿನ ಜನವಸತಿ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ. ಆಯಾ ತಹಶೀಲ್ದಾರ್‌ಗಳು ತಮ್ಮ ತಾಲೂಕಿನ ಪ್ರಾಕೃತಿಕ ವಿಕೋಪಗಳ ನಿರ್ವಹಣೆಗೆ ಹೊಣೆಗಾರರಾಗಿದ್ದು, ಸಾರ್ವಜನಿಕರಿಗೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಲಿದ್ದಾರೆ. ಸಾರ್ವಜನಿಕರೂ ಈ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಶಿರಾಡಿ ಹಾಗೂ ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ ತೆರವಿಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News