ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಆರೋಪಿ ಬಂಧನ

Update: 2018-08-14 16:39 GMT

ಬೆಂಗಳೂರು, ಆ.14: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಆರೋಪಿ ಮಂಡ್ಯ ಮೂಲದ ವೆಂಕಟೇಶ್(28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಬಾಬ್ ಅಂಗಡಿ ಇಟ್ಟುಕೊಂಡಿದ್ದ ಆರೋಪಿ ವೆಂಕಟೇಶ್, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ತೆರಳಿ ಹದಿನೇಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಪರಾರಿಯಾಗಿದ್ದ ಎನ್ನಲಾಗಿದೆ.

ಈ ಬಗ್ಗೆ ಬಾಲಕಿಯ ಸಹೋದರಿಯರು ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News