ಬೆಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2018-08-14 16:42 GMT

ಬೆಂಗಳೂರು, ಆ.14: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶ್ರೀನಗರದ ನಿವಾಸಿ ಗಿರೀಶ್(29) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವು ದಿನಗಳಿಂದ ಕಾಯಿಲೆಗೆ ತುತ್ತಾಗುತ್ತಿದ್ದ ಗಿರೀಶ್ ಜಿಗುಪ್ಸೆಗೊಂಡಿದ್ದ ಎನ್ನಲಾಗಿದ್ದು, ಸೋಮವಾರ ರಾತ್ರಿ 7:45ರ ಸುಮಾರಿಗೆ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News