ಕೇರಳದಲ್ಲಿ ಮುಂದುವರಿದ ಮಳೆ: ಪರಿಹಾರ ಶಿಬಿರದಲ್ಲಿ 30 ಸಾವಿರ ಜನ

Update: 2018-08-14 17:01 GMT

ತಿರುವನಂತಪುರ, ಆ. 14: ಉತ್ತರ ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಸಂಭವಿಸಿದ ನೆರೆಯಿಂದಾಗಿ 30 ಸಾವಿರಕ್ಕೂ ಅಧಿಕ ಜನರಿಗೆ ಪರಿಹಾರ ಶಿಬಿರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿನ ಹೆಚ್ಚಿನ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ವಯನಾಡ್, ಮಲಪ್ಪುರಂ, ಕಣ್ಣೂರು, ಕಾಸರಗೋಡು ಹಾಗೂ ಪಾಲಕ್ಕಾಡ್‌ನಲ್ಲಿ ಭಾರೀ ಮಳೆ ಸುರಿದಿದೆ ಎಂದು ವಿಪತ್ತು ನಿಯಂತ್ರಣ ಕೊಠಡಿಯ ಮೂಲಗಳು ತಿಳಿಸಿವೆ. ಈ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ. ರಾಜ್ಯದಲ್ಲಿ ಆಗಸ್ಟ್ 8ರಿಂದ ಸುರಿಯಲು ಆರಂಭಿಸಿರುವ ಧಾರಾಕಾರ ಮಳೆಗೆ 20 ಸಾವಿರ ಮನೆಗಳಿಗೆ ಹಾನಿ ಉಂಟಾಗಿವೆ. 10 ಸಾವಿರ ಕಿ.ಮೀ. ರಸ್ತೆಗಳಿಗೆ ಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಈ ಬಾರಿ ಓಣಂ ಹಬ್ಬ ಆಚರಿಸದೇ ಇರಲು ನಿರ್ಧರಿಸಿರುವ ಸರಕಾರ ಆ ಹಣವನ್ನು ನೆರೆ ಸಂತ್ರಸ್ತರಿಗೆ ಬಳಸಿಕೊಳ್ಳಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News