ಶಿರಾಡಿ, ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್

Update: 2018-08-15 05:28 GMT

ಮಂಗಳೂರು, ಆ.15: ಮಳೆಯಿಂದ ತತ್ತರಿಸಿರುವ ಶಿರಾಡಿ ಘಾಟ್ ಹಾಗೂ ಸಂಪಾಜೆ  ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಗುಡ್ಡು ಕುಸಿತದಂತಹ ಅಪಾಯಕಾರಿ ಸನ್ನಿವೇಶಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

ಸದ್ಯ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಮಾತ್ರ ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News