ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ: ಕಟ್ಟೆಚ್ಚರ ವಹಿಸಲು ಸಿಎಂ ಕುಮಾರಸ್ವಾಮಿ ಸೂಚನೆ

Update: 2018-08-15 13:17 GMT

ಬೆಂಗಳೂರು, ಆ. 15: ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.

ಮೇಲ್ಕಂಡ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳು ಮಳೆಯಿಂದ ಸಂಭವಿಸಬಹುದಾದ ಪ್ರವಾಹ, ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಪರಿಹಾರ ಒದಗಿಸಲು ಸನ್ನದ್ಧರಾಗಿರುವಂತೆ ಸೂಚಿಸಿದ್ದಾರೆ.

ಹಾಗೆಯೇ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಮಳೆ ಹಾನಿ ಕುರಿತು ನಿಗಾ ವಹಿಸುವಂತೆ ತಿಳಿಸಿದ್ದಾರೆ. ಅಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ಕುಮಾರಸ್ವಾಮಿ ಇದೇ ವೇಳೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News