ಕಾಬೂಲ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 25 ಮಂದಿ ಮೃತ್ಯು

Update: 2018-08-15 14:15 GMT

ಕಾಬೂಲ್, ಆ.15: ಶಿಕ್ಷಣ ಸಂಸ್ಥೆಯೊಂದರ ಎದುರುಗಡೆ ಆತ್ಮಾಹುತಿ ಬಾಂಬರ್ ಒಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ಘಟನೆಯಲ್ಲಿ ಕನಿಷ್ಟ 25 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಬೂಲ್ ಸಮೀಪ ಈ ಘಟನೆ ನಡೆದಿದೆ. ಸದ್ಯಕ್ಕೆ ಈ ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. 25 ಮಂದಿ ದಾಳಿಯಲ್ಲಿ ಮೃತಪಟ್ಟಿದ್ದರೆ, 35 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News