ಮುಸ್ಲಿಂ ಸಮಾಜ ಬಂಟ್ವಾಳ ವತಿಯಿಂದ ಸಚಿವ ಖಾದರ್‌ಗೆ ಅಭಿನಂದನೆ

Update: 2018-08-15 14:19 GMT

ಬಂಟ್ವಾಳ, ಆ. 15: ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರನ್ನು ಮುಸ್ಲಿಂ ಸಮಾಜ ಬಂಟ್ವಾಳ ಇದರ ವತಿಯಿಂದ ಬುಧವಾರ ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಂಘದ ಕಾರ್ಯವನ್ನು ಶ್ಲಾಘಿಸಿ, ಸಮುದಾಯ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಮುಸ್ಲಿಂ ಸಮಾಜ ಬಂಟ್ವಾಳ ಅಧ್ಯಕ್ಷ ಇಬ್ನು ಅಬ್ಬಾಸ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಎಚ್. ಖಾದರ್, ಕೋಶಾಧಿಕಾರಿ ಹನೀಫ್ ಖಾನ್ ಕೋಡಾಜೆ, ಪಿ.ಎ.ರಹೀಂ, ಮುಹಮ್ಮದ್ ಮೋನು, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಹಂಡೆಲ್ ಮೋನು, ಕುಂಞಿ ಮೋನಾಕ ಮತ್ತಿತರರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಕೆ.ಎಚ್.ಅಬೂಬಕರ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಗೂಡಿನಬಳಿ ವಂದಿಸಿದರು. ಸದಸ್ಯ ಅಕ್ಬರ್ ಅಲಿ ಪೊನ್ನೋಡಿ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಮೊದಲು "ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಸ್ಲಿಮರ ಪಾತ್ರ" ಎಂಬ ವಿಷಯದ ಕುರಿತು ಲೇಖಕ ಇಸ್ಮಾತ್ ಫಜೀರ್ ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News