ಪ್ರಧಾನಿ ಮೋದಿ, ಸ್ಮೃತಿ ಇರಾನಿಯಿಂದ ವಾಜಪೇಯಿ ಭೇಟಿ
Update: 2018-08-15 19:50 IST
ಹೊಸದಿಲ್ಲಿ, ಆ.15: ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿಯಾದರು.
ಕಳೆದ ಕೆಲ ದಿನಗಳಿಂದ ವಾಜಪೇಯಿ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರಪಿಂಡದ ಸಮಸ್ಯೆಗೆ ಚಿಕಿತ್ಸೆಗಾಗಿ ವಾಜಪೇಯಿಯವರನ್ನು ಜೂನ್ 11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.