ದೇಶದ ಪ್ರಗತಿಯ ರೂವಾರಿಗಳಾಗಲು ಪಣ ತೊಡಿ: ಭೂಬಾಲನ್

Update: 2018-08-15 14:23 GMT

ಕುಂದಾಪುರ, ಆ.15: ಸ್ವಾತಂತ್ರ ಹೋರಾಟಗಾರರು ಕಂಡ ಭವ್ಯ ಭಾರತದ ಕನಸನ್ನು ಸಾಕಾರಗೊಳಿಸಲು ನಾವೆಲ್ಲರು ಪಣ ತೊಡುವ ಮೂಲಕ ದೇಶದ ಪ್ರಗತಿಯ ರೂವಾರಿಗಳಾಗಬೇಕು ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಟಿ.ಭೂಬಾಲನ್ ಹೇಳಿದ್ದಾರೆ.

ಕುಂದಾಪುರದ ಗಾಂಧಿ ಮೈದಾನದಲ್ಲಿ ಕುಂದಾಪುರ ತಾಲೂಕು ಆಡಳಿತ, ಪುರಸಭೆ ವತಿಯಿಂದ ಆಯೋಜಿಸಲಾದ 72ನೆ ಸ್ವಾತಂತ್ರ್ಯೋತ್ಸವದ ಧ್ವಜಾ ರೋಹಣಗೈದು, ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತ ನಾಡುತಿದ್ದರು.

ಅಭಿವೃದ್ಧಿಯೇ ಆಡಳಿತದ ಮೂಲಮಂತ್ರವಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಸೌಲಭ್ಯಗಳು ಸಿಗುವಂತೆ ಮಾಡುವುದೇ ಸರಕಾರದ ಆದ್ಯ ಕರ್ತವ್ಯ ವಾಗಿದೆ. ರಾಜ್ಯದ ಕಲ್ಯಾಣಕ್ಕಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಯುವಜನತೆ ರಾಷ್ಟ್ರಪ್ರೇಮವನ್ನು ಮೈಗೂಡಿಸಿ, ಸೇವಾ ಮನೋಭಾವ ದಿಂದ ಈ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ತಾಪಂ ಅಧ್ಯಕ್ಷೆ ಜಯಶ್ರೀ ಎಸ್.ಮೊಗವೀರ, ಪುರಸಭೆ ಅಧ್ಯಕ್ಷೆ ವಸಂತಿ ಮೋಹನ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ಶೆಟ್ಟಿ, ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಪಂ ಕಾರ್ಯನಿರ್ವ ಹಣಾಧಿಕಾರಿ ಕಿರಣ್ ಪೆಡ್ನೇಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಕುಂದಾಪುರ ಡಿವೈಎಸ್ಪಿ ಬಿ.ಪಿ.ದಿನೇಶ್ ಕುಮಾರ್, ವೃತ್ತ ನಿರೀಕ್ಷಕ ಮಂಜಪ್ಪ, ಅರಣ್ಯ ಇಲಾಖೆಯ ಕುಂದಾಪುರ ವಲಯದ ಅರಣ್ಯಾಧಿಕಾರಿ ಶರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News