ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2018-08-15 14:30 GMT

ಉಡುಪಿ, ಆ.15: ತೋನ್ಸೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ 72ನೆ ಸ್ವಾತಂತ್ರ್ಯ ದಿನವನ್ನು ಇಂದು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ತೋನ್ಸೆ ಜದೀದ್ ಜಾಮಿಯ ಮಸೀದಿ ಖತೀಬ್ ಮೌಲಾನ ಅಜ್ಗಾರ್ ಖಾಸ್ಮಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದ ಮಹತ್ವವನ್ನು ತಿಳಿಸಿದರು. ಆಡಳಿತಾಧಿಕಾರಿ ಅ್ಲಂ ಹೈಕಾಡಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಧ್ವಜ ಗೀತೆ ಹಾಡಿದರು. ತೃತೀಯ ಬಿಕಾಂನ ಅರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News