ಉಳ್ಳಾಲ ದರ್ಗಾ ವಠಾರದಲ್ಲಿ ಸ್ವಾತಂತ್ರೋತ್ಸವ ಆಚರಣೆ

Update: 2018-08-15 18:21 GMT

ಮಂಗಳೂರು, ಆ.15: ಬ್ರಿಟೀಷರ ಗುಲಾಮಗಿರಿಯಿಂದ ಮುಕ್ತಿ ಹೊಂದಿ ಸ್ವಾತಂತ್ರ್ಯ ಸಿಗಬೇಕಾದರೆ ದೇಶದ ಸಹಸ್ರಾರು ಮಂದಿ ಹೋರಾಟ ಮಾಡಿ ತಮ್ಮ ಪ್ರಾಣ ಬಲಿ ನೀಡಿದ್ದಾರೆ. ಅದರ ಫಲವಾಗಿ ನಾವಿಂದು ಆಚರಿಸುತ್ತಿರುವ ಸ್ವಾತಂತ್ರ್ಯವನ್ನು ಉಳಿಸುವ ಜವಾಬ್ದಾರಿ ನಮ್ಮ ಮುಂದಿದೆ. ತನ್ನ ದೇಶವನ್ನು ಪ್ರೀತಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುರ್ರಶೀದ್ ಉಳ್ಳಾಲ ಹೇಳಿದರು.

ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ಸಮಿತಿ ವತಿಯಿಂದ ಬುಧವಾರ ನಡೆದ 72ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು ಅವರು ಮಾತನಾಡಿದರು.

ಮಸೀದಿಯ ಖತೀಬ್ ಅಬ್ದುಲ್ ಅಝೀಝ್ ಬಾಖವಿ ದುಆ ಮಾಡಿದರು. ಈ ಸಂದರ್ಭ ದರ್ಗಾ ಉಪಾಧ್ಯಕ್ಷ ಬಾವ ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹ, ಲೆಕ್ಕಪರಿಶೋಧಕ ಯು.ಟಿ. ಇಲ್ಯಾಸ್, ಜತೆ ಕಾರ್ಯದರ್ಶಿ ನೌಷಾದ್ ಮೇಲಂಗಡಿ, ಆಝಾದ್ ಇಸ್ಮಾಯೀಲ್, ಅರಬಿಕ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಜಿ ಅಮೀರ್, ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲ, ಕೋಶಾಧಿಕಾರಿ ಅಬ್ಬಾಸ್ ಹಾಜಿ ಪಿಲಾರ್, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫ ಅಬ್ದುಲ್ಲ, ಸದಸ್ಯರಾದ ಫಾರೂಕ್ ಉಳ್ಳಾಲ್, ಅಬೂಬಕ್ಕರ್ ಕೋಟೆಪುರ, ಮಯ್ಯದ್ದಿ ಕೋಡಿ, ಮುಸ್ತಫಾ ಕಲ್ಲಾಪು, ಹಸನಬ್ಬ ಕೈಕೊ, ಹಮೀದ್ ಕೋಡಿ, ಅಲಿ ಮೂನು, ಅದ್ದ ಕೋಟೆಪುರ, ಅಬೂಬಕ್ಕರ್ ಅಲೀನಗರ, ಹಮ್ಮಬ್ಬ ಕೋಟೆಪುರ, ಎಚ್.ಕೆ ಮುಹಮ್ಮದ್, ಹಸೈನಾರ್, ಮಹ್ಮೂದ್ ಅಳೇಕಲ, ಅರಬಿಕ್ ಕಾಲೇಜಿನ ಪ್ರಾಂಶುಪಾಲ ಉಸ್ಮಾನುಲ್ ಫೈಝಿ ತೋಡಾರ್, ದಅವಾ ಕಾಲೇಜಿನ ಪ್ರಾಂಶುಪಾಲ ಇಬ್ರಾಹೀಮ್ ಅಹ್ಸನಿ, ಹಿಫ್ಲುಲ್ ಕಾಲೇಜಿನ ಪ್ರಾಂಶುಪಾಲ ಹಾಫಿಲ್ ಝೈನ್ ಸಖಾಫಿ ಹಾಗೂ ಮದ್ರಸದ ಸದರ್ ಮುಅಲ್ಲಿಮರು, ಶಾಲಾ ಕಾಲೇಜಿನ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು, ವಿದಾರ್ಥಿಗಳು ಮತ್ತು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು. ಅಬ್ದುಲ್ ಸಲಾಮ್ ಮದನಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News