ಎಕ್ಸಲೆಂಟ್ ಕಾಲೇಜು: ಸಂಭ್ರಮದ 72ನೇ ಸ್ವಾತಂತ್ರ್ಯ ದಿನಾಚರಣೆ

Update: 2018-08-15 18:37 GMT

ಮೂಡುಬಿದಿರೆ, ಆ.15: ಭಾರತ ಕಳೆದ 72 ವರ್ಷಗಳಲ್ಲಿ ಇದ್ದಂತೆ ಇಲ್ಲ. ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದ್ದೇವೆ. ವಿಮಾನದಿಂದ ಹಿಡಿದು ಚಂದ್ರಯಾನದವರೆಗೂ ಅಭೂತಪೂರ್ವ ಸಾಧನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಭಾರತ ’ವಿಶ್ವಗುರು’ ಆಗುವುದರಲ್ಲಿ ಸಂಶಯವಿಲ್ಲ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಅವರು ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಭಾರತಕ್ಕೆ ಅನೇಕರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದೆ. ಅದನ್ನು ದೇಶದ ಪ್ರಜ್ಞಾವಂತ ನಾಗರೀಕರಾದ ನಾವು ಉಳಿಸಿಕೊಳ್ಳಬೇಕಿದೆ. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಭಾರತ ಮಾತೆಯ ಸೇವೆ ಮಾಡುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಗುರುಪ್ರಸಾದ್ ಶೆಟ್ಟಿ, ಆಡಳಿತಾಧಿಕಾರಿ ಹರೀಶ್ ಶೆಟ್ಟಿ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗಣಿತ ಶಾಸ್ತ್ರ ಅಧ್ಯಾಪಕ ಶಿವಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News