ಕಲ್ಲಡ್ಕ: ಮುಹಿಯುದ್ದೀನ್ ಮಸೀದಿ ಆಡಳಿತ ಸಮಿತಿಗೆ ಚುನಾವಣೆ

Update: 2018-08-16 09:26 GMT

ವಿಟ್ಲ, ಆ.16: ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಸಮಿತಿಗೆ ಇಲ್ಲಿನ ಮದ್ರಸದಲ್ಲಿ ಇಂದು ಚುನಾವಣೆ ನಡೆಯುತ್ತಿದೆ.

ಬೆಳಗ್ಗೆ 9ರಿಂದ ಆರಂಭಗೊಂಡಿರುವ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಒಟ್ಟು 553 ಮಂದಿ ಮತದಾನ ಮಾಡುವ ಅವಕಾಶ ಹೊಂದಿದ್ದು, ಈ ಪೈಕಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ವೇಳೆಗೆ 327 ಮಂದಿ ಮತ ಚಲಾಯಿಸಿದ್ದಾರೆ. ಆ ಮೂಲಕ ಶೇಕಡ 61ಮತದಾನ ನಡೆದಿದೆ.

3 ಗಂಟೆಯವರೆಗೆ ಮತ ಚಲಾಯಿಸಲು ಅವಕಾಶ ಇದೆ. ಸಂಜೆ 5 ಗಂಟೆಗೆ ಫಲಿತಾಂಶ ಹೊರಬೀಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News