×
Ad

ಕೋಣಾರ ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Update: 2018-08-16 17:11 IST

ಭಟ್ಕಳ,ಆ.16: ತಾಲೂಕಿನ ಕೋಣಾರ ಗ್ರಾಮದ ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ರಾಜು ಗೊಂಡ(32) ಎಂದು ಗುರುತಿಸಲಾಗಿದೆ.

ಮಂಗಳವಾರ ಕೋಣಾರ ಗ್ರಾಮದ ಹದ್ಲೂರಿನಲ್ಲಿ ಬೆಳಿಗ್ಗೆ ಹೊಲದಲ್ಲಿ ಕೆಲಸ ಮಾಡಲು ಹೋಗುತ್ತಿದ್ದಾಗ ಬಿರುಸಿನ ಮಳೆಯಿಂದಾಗಿ ನಿರ್ಮಾಣಗೊಂಡಿದ್ದ ಕೃತಕ ಹೊಳೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಎನ್ನಲಾಗಿದ್ದು ಆತನ ಮೃತದೇಹ ಬುಧವಾರ ಸಂಜೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News