ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಹೊಲಿಗೆ ಯಂತ್ರ ವಿತರಣೆ

Update: 2018-08-16 12:57 GMT

ಮಂಗಳೂರು, ಆ.16: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಬಡ ಕುಟುಂಬಗಳಿಗೆ ಹೊಲಿಗೆ ಯಂತ್ರ ವಿತರಣೆ, ಸೀರೆ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಬದ್ರಿಯಾ ರಸ್ತೆ, ಕಂದಕ್ ಪ್ರದೇಶದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎನ್.ಇಸ್ಮಾಯೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮಹಾಪೌರ ಭಾಸ್ಕರ ಕೆ. ಹಾಗೂ ಉಪ ಮಹಾಪೌರ ಮುಹಮ್ಮದ್ ಕುಂಜತ್‌ಬೈಲ್, ಮನಪಾ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ ಲತಾ ಕಮಲಾಕ್ಷ ಸಾಲ್ಯಾನ್, ಸ್ಥಳೀಯ ಪಾಲಿಕೆ ಸದಸ್ಯ ಅಬ್ದುಲ್ ಲತೀಫ್, ಅಸಿಸ್ಟೆಂಟ್ ಕಮಿಷನರ್ ಕೆ.ರಾಮ ರಾವ್, ಕಾರ್ಮಿಕ ಅಧಿಕಾರಿ ವಿಲ್ಮ ಎಲಿಜಬೆತ್ ತಾವ್ರೊ, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಹನುಮಂತ ಕಾಮತ್ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News