×
Ad

ಮಾಜಿ ಪ್ರಧಾನಿ ವಾಜಪೇಯಿ ನಿಧನ : ಸಚಿವ ಖಾದರ್ ಸಂತಾಪ

Update: 2018-08-16 18:56 IST

ಮಂಗಳೂರು, ಆ.16: ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಪ್ರತಿಮ ಸಂಸದೀಯ ಪಟುವಾಗಿದ್ದ ವಾಜಪೇಯಿ ದೇಶದ ಒಳಿತಿಗಾಗಿ ಹಲವಾರು ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದರು. ಸ್ವಾತಂತ್ರ್ಯೋತ್ತರ ಭಾರತದ ಹಲವು ಪ್ರಮುಖ ಯೋಜನೆಗಳ ಹಿಂದೆ ವಾಜಪೇಯಿ ಒತ್ತಾಸೆ ಇದೆ. ಸರ್ವರನ್ನೂ ಗೌರವಿಸುವ ವಾಜಪೇಯಿ ಅವರ ಗುಣ, ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಸಚಿವ ಖಾದರ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News