ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ

Update: 2018-08-16 15:53 GMT

ಮಂಗಳೂರು, ಆ.16: ಅರಬಿ ಸಮುದ್ರದ ಅಲೆಗಳು 3.5ರಿಂದ 4 ಮೀಟರ್‌ಗಳಷ್ಟು ಎತ್ತರದಲ್ಲಿ ಅಪ್ಪಳಿಸುತ್ತಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚನೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆ (204 ಮಿ.ಮೀ.)ಬೀಳುವ ಸಾಧ್ಯತೆಯಿದೆ. ಶಿರಾಡಿ ಮತ್ತು ಸಂಪಾಜೆ ಘಾಟ್‌ಗಳಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣ ಹೆಚ್ಚಾದಲ್ಲಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್‌ರು ರಜೆ ಘೋಷಿಸಬಹುದಾಗಿದೆ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಉಚಿತ ಸಹಾಯವಾಣಿ 1077ನ್ನು ಸಂಪರ್ಕಿಸಿ, ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News