ಸಚಿವೆ ಜಯಮಾಲಾರಿಂದ ಅಧಿಕಾರಿಗಳ ಜೊತೆ ಸಮಾಲೋಚನೆ
Update: 2018-08-16 22:02 IST
ಉಡುಪಿ, ಆ.16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಜಯಮಾಲಾ ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವರಗಳನ್ನು ಪಡೆದುಕೊಂಡರು. ಅತಿವೃಷ್ಠಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯ ಅಧಿಕಾರಿಗಳು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಭೂವಿಜ್ಞಾನ ಅಧಿಕಾರಿಗಳೊಂದಿಗೆ ಸಚಿವರು ಪ್ರತ್ಯೇಕ ಪ್ರತ್ಯೇಕವಾಗಿ ಚರ್ಚಿಸಿದರು. ಅಪರ ಜಿಲ್ಲಾಧಿಕಾರಿ ಶ್ರೀವಿದ್ಯಾ ಉಪಸ್ಥಿತರಿದ್ದರು.