×
Ad

ಪರಿಹಾರ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ: ಸಚಿವ ದೇಶಪಾಂಡೆ

Update: 2018-08-16 22:05 IST

ಬೆಂಗಳೂರು, ಆ. 16: ಭಾರೀ ಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗು ಜಿಲ್ಲೆಗೆ ನಾಳೆ(ಆ.17) ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ 10.30ಕ್ಕೆ ಮಡಿಕೇರಿಯನ್ನು ತಲುಪಲಿರುವ ಸಚಿವರು, ಜಿಲ್ಲೆಯಲ್ಲಿ ತೀವ್ರ ಮಳೆಹಾನಿಗೆ ಒಳಗಾಗಿರುವ ಪ್ರದೇಶಗಳ ಖುದ್ದು ವೀಕ್ಷಣೆ ನಡೆಸಲಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮಗಳನ್ನು ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.

ನಿರಂತರ ಮಳೆ ಮತ್ತು ಅದರ ಪರಿಣಾಮವಾಗಿ ಉಂಟಾಗುತ್ತಿರುವ ಭೂಕುಸಿತ ಮತ್ತಿತರ ಹಾನಿಗಳನ್ನು ತಡೆಗಟ್ಟಲು/ಸರಿಪಡಿಸಲು ಮತ್ತು ತೊಂದರೆಯಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಸರಕಾರವು ಅಗತ್ಯ ಕ್ರಮಗಳನ್ನೆಲ್ಲ ತೆಗೆದುಕೊಂಡಿದೆ. ಜನರು ಅನಗತ್ಯವಾಗಿ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಸಚಿವ ದೇಶಪಾಂಡೆ ಮನವಿ ಮಾಡಿದ್ದಾರೆ.

ಮಳೆಯಿಂದ ಹಾನಿಗೀಡಾಗಿರುವ ಯಾವ ಪ್ರದೇಶಗಳಲ್ಲೇ ಆಗಲಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಹಣಕಾಸಿನ ಕೊರತೆಯೇನೂ ಇಲ್ಲ. ಆದರೆ, ಪ್ರತಿಕೂಲ ಹವಾಮಾನವು ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News