ಮೈಸೂರು: ಸಂವಿಧಾನ ಸುಟ್ಟ ದೇಶದ್ರೋಹಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Update: 2018-08-16 18:02 GMT

ಮೈಸೂರು,ಆ.16: ಸಂವಿಧಾನದ ಪ್ರತಿಯನ್ನು ಸುಟ್ಟಿರುವ ದೇಶದ್ರೋಹಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದಿಂದ ಪೊರಕೆ ಚಳವಳಿ ನಡೆಯಿತು.

ನಗರದ ಪುರಭವನದ ಮುಂಭಾಗ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂಭಾಗ ಗುರುವಾರ ಪೊರಕೆ ಚಳವಳಿ ನಡೆಸಿದ ಪೌರಕಾರ್ಮಿಕರು ಮಾತನಾಡಿ, ಸಂವಿಧಾನ ಪ್ರತಿಯನ್ನು ಸುಡುವ ಮೂಲಕ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಇಷ್ಟೆಲ್ಲಾ ಕೃತ್ಯಗಳು ಪೊಲೀಸರೆದುರೇ ನಡೆಯುತ್ತಿದ್ದರೂ ಇವರ ವಿರುದ್ಧ ಕ್ರಮ ಕೈಗೊಂಡಿಲ್ಲ. ದೇಶದ್ರೋಹಿಗಳನ್ನು ಮತ್ತು ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಮನುವಾದಿಗಳನ್ನು ಬಂಧಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಚಳವಳಿಯಲ್ಲಿ ರಾಜ್ಯಾಧ್ಯಕ್ಷ ಮಾರಾಯಣ, ಮಾರ, ಮಹದೇವ, ಮುರುಗೇಶ್, ಚಲುವರಾಜು, ವೆಂಕಟೇಶ್, ಸೋಮಶೇಖರ್ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News