ಮಾಜಿ ಪ್ರಧಾನಿ ವಾಜಪೇಯಿ ನಿಧನ: ಸಿದ್ದಗಂಗಾ ಶ್ರೀ ಸಂತಾಪ

Update: 2018-08-16 18:09 GMT

ತುಮಕೂರು.ಆ.16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಸಿದ್ದಗಂಗಾ ಮಠಾಧ್ಯಕ್ಷ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯ ಮುಖ್ಯಸ್ಥರಿಂದ ವಾಜಪೇಯಿ ಅವರು ನಿಧನವನ್ನು ದೃಢಪಡಿಸಿದ ನಂತರ ಮಠದ ವತಿಯಿಂದ ಬಿಡುಗಡೆ ಮಾಡಿರುವ ಸಂತಾಪ ಸೂಚಕ ಪತ್ರದಲ್ಲಿ ವಿಷಯ ಪ್ರಸ್ತಾಪಿಸಿರುವ ಶ್ರೀಗಳು, ಅವರು ಪ್ರಧಾನಿಯಾಗಿದ್ದ ಕಾಲದಲ್ಲಿ ಬಡವರ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದರು. ರಾಷ್ಟ್ರದೆಲ್ಲೆಡೆ ಚತುಸ್ಪಥ ರಸ್ತೆಗಳನ್ನು ನಿರ್ಮಿಸಿ, ದಕ್ಷಿಣದಿಂದ ಉತ್ತರದವರೆಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದರು. ಅಂತರಾಜ್ಯ ನದಿ ಜೋಡಣೆಯ ಕನಸು ಕಂಡಿದ್ದರು. 1999ರ ಜನವರಿ 03ರಂದು ಸಿದ್ದಗಂಗಾ ಮಠದಲ್ಲಿ ನಡೆದ 83ನೇ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಹಿತವಚನ ಹೇಳಿದ್ದರು. ಅವರ ಸಾವಿನಿಂದ ದೇಶಕ್ಕೆ ಅಪಾರ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಸ್ವಾಮೀಜಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News